Connect with us

Cinema News

‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಆಡಿಯೋಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

Published

on

ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಜಾಹುಲಿ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಹೊನ್ನರಾಜ್ ಇದೀಗ ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಚಿತ್ರದ ಮೂಲಕ ನಾಯಕ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಹೊಸ ಪಯಣ ಆರಂಭಿಸಿದ್ದಾರೆ. ಕಲಾವಿದರ ಸಂಘದಲ್ಲಿ ನಡೆದ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರೆ, ಲವ್ಲಿ ಸ್ಟಾರ್ ಪ್ರೇಮ್ ಹಾಡುಗಳನ್ನು ಅನಾವರಣಗೊಳಿಸಿದರು. ನಿರ್ಮಾಪಕರ ಸಂಘದ ಎಂ.ಜಿ. ರಾಮಮೂರ್ತಿ ಹಾಗೂ ನಿರ್ಮಾಪಕ ಸಾರಾ ಗೋವಿಂದು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಹೊನ್ನರಾಜ್ ಒಂದೇ ಚಿತ್ರದಲ್ಲಿ ನಟನೆ, ನಿರ್ದೇಶನ ಮತ್ತು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿರುವುದು ಶ್ಲಾಘನೀಯ ಎಂದು ಹೇಳಿ, ಸಿನಿಮಾ ಯಶಸ್ಸು ಕಂಡು ಹೂಡಿಕೆಯ ಹಲವು ಪಟ್ಟು ಲಾಭ ತರಲಿ ಎಂದು ಶುಭ ಹಾರೈಸಿದರು. ನಟ ಪ್ರೇಮ್ ಕೂಡ ಹೊನ್ನರಾಜ್ ಅವರ ಪರಿಶ್ರಮವನ್ನು ಮೆಚ್ಚಿ, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿ ಎಂದು ಹಾರೈಸಿದರು.

ಚಿತ್ರದ ಬಗ್ಗೆ ಮಾತನಾಡಿದ ಹೊನ್ನರಾಜ್, ಇದು ಹಳ್ಳಿ ಸೊಗಡಿನ ಫ್ಯಾಮಿಲಿ ಎಂಟರ್‌ಟೈನರ್ ಆಗಿದ್ದು, ಯಶ್ ಅಭಿಮಾನಿಯಾದ ನಾಯಕನ ಕಥೆಯನ್ನು ಒಳಗೊಂಡಿದೆ ಎಂದರು. ಸಮಾಜಸೇವೆಯ ಕನಸು ಹೊತ್ತ ಯುವಕ ತನ್ನ ಊರಿಗಾಗಿ ಕೆಲಸ ಮಾಡುವ ವೇಳೆ ಎದುರಿಸುವ ಸವಾಲುಗಳನ್ನು ಮನರಂಜನೆಯೊಂದಿಗೆ ಚಿತ್ರದಲ್ಲಿ ಹೇಳಲಾಗಿದೆ. ಮದ್ದೂರು, ಹುಳಿಯಾರು, ಚಿಕ್ಕನಾಯಕನಹಳ್ಳಿ ಹಾಗೂ ಶ್ರೀರಂಗಪಟ್ಟಣ ಸುತ್ತಮುತ್ತ 65 ದಿನಗಳ ಕಾಲ ಚಿತ್ರೀಕರಣ ನಡೆದಿದ್ದು, ನಾಯಕಿಯಾಗಿ ಶೃತಿ ಬಬಿತ ಅಭಿನಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಚಿತ್ರಕ್ಕೆ ಈಗಾಗಲೇ ಸೆನ್ಸಾರ್‌ನಿಂದ ಯು/ಎ ಪ್ರಮಾಣಪತ್ರ ದೊರೆತಿದ್ದು, ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ. ಶ್ರೀ ಸತ್ಯಲಕ್ಷ್ಮಿ ಕ್ರಿಯೇಶನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ವಿನು ಮನಸು ಸಂಗೀತ ನೀಡಿದ್ದು, ಶಿವಪುತ್ರ ಛಾಯಾಗ್ರಹಣ ಹಾಗೂ ಗಿರೀಶ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಮೈಸೂರು ಮಂಜುಳ, ರೇಖಾದಾಸ್, ಮಂಜಣ್ಣ, ಗಿರೀಶ್ ಸೇರಿದಂತೆ ಹಲವು ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

Spread the love

Continue Reading