Cinema News

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮತ್ತಷ್ಟು ಚಿತ್ರಗಳು

Published

on

ಮೋಹಕ ತಾರೆ ನಟಿ ರಮ್ಯಾ ತಮ್ಮ ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಇದೀಗ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ವಿಜಯದಶಮಿ ವೇಳೆ ಘೋಷಣೆ ಆಗಿದ್ದ ಈ ಸಿನಿಮಾ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ಮುಗಿಸಿಕೊಂಡಿದೆ.
ರಾಜ್‌ ಬಿ ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡುವುದರ ಜತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ. ಸಿರಿ ರವಿಕುಮಾರ್‌ ನಾಯಕಿಯಾಗಿದ್ದಾರೆ. ಇನ್ನುಳಿದಂತೆ ಬಾಲಾಜಿ ಮನೋಹರ್‌, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆಪಿ ತುಮ್ಮಿನಾಡ್‌, ಗೋಪಾಲ್‌ಕೃಷ್ಣ ದೇಶಪಾಂಡೆ ಇನ್ನುಳಿದ ತಾರಾಗಣದಲ್ಲಿದ್ದಾರೆ.

ಪ್ರವೀಣ್‌ ಶ್ರೀಯಾನ್‌ ಛಾಯಾಗ್ರಹಣ ಮತ್ತು ಸಂಕಲನದ ಜವಾಬ್ದಾರಿ ಹೊತ್ತರೆ, ಮಿಧುನ್‌ ಮುಕುಂದನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಒಂದು ಪ್ರಬುದ್ಧ ಲವ್‌ಸ್ಟೋರಿ. ಒಂದು ಭಾವುಕ ಪ್ರಯಾಣ. ಈ ಭಾವುಕ ಜರ್ನಿ ಹೇಗಿರಲಿದೆ ಎಂಬುದನ್ನು ಹೇಳಲೆಂದೇ ಇತ್ತೀಚೆಗೆ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆ ಆಗಿತ್ತು. ಇದೀಗ ಇದೇ ಚಿತ್ರದ ಒಂದಷ್ಟು ಎಕ್ಸ್‌ಕ್ಲೂಸಿವ್‌ ಫೋಟೋಗಳು ಇಲ್ಲಿವೆ..

 

Spread the love

Copyright © 2019 PopcornKannada.com