Cinema News
ಬಹುಭಾಷಾ ನಟಿ ಮೀನಾ ಪತಿ ಅನಾರೋಗ್ಯದಿಂದ ನಿಧನ

ದಕ್ಷಿಣ ಭಾರತದ ಖ್ಯಾತ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ವಿದ್ಯಾಸಾಗರ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಿದ್ಯಾಸಾಗರ್ ಕೆಲವು ವರ್ಷಗಳಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದು, ಜನವರಿಯಲ್ಲಿ ಕುಟುಂಬ ಕೋವಿಡ್ 19 ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಸೋಂಕು ಉಲ್ಬಣಗೊಂಡಿದ್ದರೂ ವಿದ್ಯಾಸಾಗರ್ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಆದರೆ ಸೋಂಕು ಮತ್ತೆ ಕಾಣಿಸಿಕೊಂಡಿದ್ದು, ಹೀಗಾಗಿ ಕೆಲವು ವಾರಗಳ ಹಿಂದೆ ವಿದ್ಯಾಸಾಗರ್ ಅವರಿಗೆ ಶ್ವಾಸಕೋಶದ ಸೋಂಕಿನ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಆದರೆ ಕಸಿ ಮಾಡಿಸಿಕೊಳ್ಳಲು ದಾನಿಗಳು ಸರಿಯಾಗಿ ಸಿಗಲಿಲ್ಲ ಎನ್ನಲಾಗಿದೆ.
ಔಷಧಿಗಳ ಮೂಲಕ ವಿದ್ಯಾಸಾಗರ್ ರನ್ನ ಗುಣಪಡಿಸಲು ಪ್ರಯತ್ನಿಸಿದ್ದರೂ ಯಾವುದೇ ಪ್ರಯೋಜನವಾಗದೇ ಅವರು ಮೃತಪಟ್ಟಿದ್ದಾರೆ. ವಿದ್ಯಾಸಾಗರ್ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕ ಮಂದಿ ಸಂತಾಪ ಸೂಚಿಸುತ್ತಿದ್ದಾರೆ.
2009ರಲ್ಲಿ ಮೀನಾ ಬೆಂಗಳೂರು ಮೂಲದ ವಿದ್ಯಾಸಾಗರ್ ಜೊತೆ ಹಸೆ ಮಣೆ ಏರಿದ್ದು, ಮದುವೆಯ ನಂತರ ಈ ಜೋಡಿ ಚೆನ್ನೈನಲ್ಲಿ ನೆಲೆಸಿತ್ತು.

