Connect with us

Cinema News

ನನ್ನ ಸಹೋದರ ಜಾಕ್ ಮಂಜು ಆರೋಗ್ಯವಾಗಿದ್ದಾರೆ, ಯಾವುದೇ ಗಂಭೀರ ಸಮಸ್ಯೆ ಇಲ್ಲ: ಕಿಚ್ಚ ಸುದೀಪ್

Published

on

ಚಂದನವನದ ನಿರ್ಮಾಪಕ ಕಿಚ್ಚ ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಮೊದಲಿಗೆ ಜಾಕ್ ಮಂಜು ಹೃದಯ ಸಂಬಂಧಿ ಖಾಯಿಲೆ ಕಾರಣಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸುದ್ದಿ ಆಯಿತು. ಬಳಿಕ ಕಾಲಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿತ್ತು. ಇದೀಗ ಸ್ನೇಹಿತನ ಬಗ್ಗೆ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಜಾಕ್ ಮಂಜು ಅವರ ಆರೋಗ್ಯದ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, “ನನ್ನ ಸಹೋದರ ಮತ್ತು ಗೆಳೆಯ ಜಾಕ್ ಮಂಜು ಆರೋಗ್ಯವಾಗಿದ್ದಾರೆ. ಇಂದು ಆಸ್ಪತ್ರೆಯಿಂದ ಅವರು ಡಿಸ್ ಚಾರ್ಜ್ ಆಗುತ್ತಿದ್ದಾರೆ. ಮುನ್ನೆಚ್ಚರಿಕೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ಗಂಭೀರ ಸಮಸ್ಯೆ ಏನೂ ಇಲ್ಲ. ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಫೋಟೋಗಳು ಎಲ್ಲರನ್ನೂ ಆತಂಕ್ಕೀಡು ಮಾಡಿದ್ದವು. ಅವರು ಆರೋಗ್ಯವಾಗಿದ್ದಾರೆ. ನಿಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.
ಕಳೆದ 20 ದಿನಗಳ ಹಿಂದೆ ಕಾರ್ಯಕ್ರಮವೊಂದಕ್ಕೆ ತೆರೆಳಿದ್ದ ವೇಳೆ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದರು. ಸಾಕಷ್ಟು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಬನ್ನೇರುಘಟ್ಟದ ಬಳಿ ಇರೋ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅಪೇರೇಷನ್ ಮಾಡಸಿಕೊಂಡಿರೋ ಜಾಕ್ ಮಂಜು ವಿಶ್ರಾಂತಿ ಪಡೆಯುತ್ತಿದ್ದಾರೆ.

Spread the love

Continue Reading
Click to comment

Leave a Reply

Your email address will not be published. Required fields are marked *