News

ಶ್ರೀಲಂಕಾದಲ್ಲಿ ನಾಗತಿಹಳ್ಳಿ ಚಿತ್ರೋತ್ಸವ

Published

on

ಶ್ರೀಲಂಕಾದ ಫಿಲಂ ಕರ್ಪೋರೇಶನ್, ಅಲ್ಲಿನ ಪ್ರವಾಸೋದ್ಯಮ ಇಲಾಖೆ, ಏಷ್ಯನ್ ಮೀಡಿಯಂ ಕಲ್ಚರಲ್ ಅಸೊಸಿಯೇಶನ್ ಮತ್ತು ಶ್ರೀಲಂಕಾದ ಭಾರತೀಯ ರಾಯಭಾರಿ ಕಛೇರಿ ಇವುಗಳ ಸಹಯೋಗದಲ್ಲಿ ಏಪ್ರಿಲ್ 27 ರಿಂದ ಮೇ 3 ರವರೆಗೆ ಶ್ರೀಲಂಕಾದಲ್ಲಿ ಅದ್ದೂರಿಯಾದ ನಾಗತಿಹಳ್ಳಿ ಚಲನ ಚಿತ್ರೋತ್ಸವ, ಚಲನಚಿತ್ರ ಕಾರ್ಯಾಗಾರ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಲಿವೆ. ನಾಗತಿಹಳ್ಳಿ ಚಂದ್ರಶೇಖರ ಅವರ ಪ್ರಶಸ್ತಿ ಪುರಸ್ಕೃತ ಹಾಗೂ ಮಹತ್ವದ ಚಿತ್ರಗಳಾದ ಅಮೆರಿಕಾ! ಅಮೆರಿಕಾ!!, ಮಾತಾಡ್ ಮಾತಾಡ್ ಮಲ್ಲಿಗೆ, ಕೋಟ್ರೇಶಿ ಕನಸು, ಇಷ್ಟಕಾಮ್ಯ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕಥಾ ನಿರೂಪಣೆ, ಚಿತ್ರಕಥೆ ರಚನೆ, ಛಾಯಾಗ್ರಹಣ,

 

 

ಸಂಕಲನ ಮುಂತಾದ ವಿಷಯಗಳ ಬಗ್ಗೆ ಶ್ರೀಲಂಕಾದ ಸಿನಿಮಾಸಕ್ತ ವಿದ್ಯಾರ್ಥಿಗಳೊಂದಿಗೆ ಕಾರ್ಯಾಗಾರವನ್ನು ನಾಗತಿಹಳ್ಳಿ ಚಂದ್ರಶೇಖರ ಅವರು ನಡೆಸಿಕೊಡಲಿದ್ದಾರೆ. ಈ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಅವರೊಟ್ಟಿಗೆ ನಟ ನಿರೂಪ್ ಭಂಡಾರಿ, ನಟಿ ಕಾವ್ಯಾಶೆಟ್ಟಿ, ಛಾಯಗ್ರಾಹಕ ಎಸ್. ಕೆ. ರಾವ್, ನಿರ್ಮಾಪಕ ವೈ.ಎನ್.ಶಂಕರೇಗೌಡ ಮತ್ತು ಮಾಧ್ಯಮ ಕ್ಷೇತ್ರದ ಮದನ್‌ಗೌಡ, ಜಿ.ಎನ್,ಮೋಹನ್ ಭಾಗವಹಿಸಲಿದ್ದಾರೆ

Spread the love
Click to comment

Copyright © 2019 PopcornKannada.com