Connect with us

Cinema News

ಅಕ್ಟೋಬರ್ 27ರಂದು ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “12 th ಫೇಲ್” ಬಿಡುಗಡೆ . ಕರ್ನಾಟಕದಲ್ಲಿ ಹೆಸರಾಂತ ಕೆ.ಆರ್.ಜಿ‌ ಸ್ಟುಡಿಯೋಸ್ ವಿತರಣೆ

Published

on

” ಪರಿಂದ”, “1942 ಎ ಲವ್ ಸ್ಟೋರಿ”, “ಥ್ರೀ ಇಡಿಯೆಟ್ಸ್” ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “12th ಫೇಲ್” ಅಕ್ಟೋಬರ್ 27 ರಂದು ಹಿಂದಿ, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ‌. ಕರ್ನಾಟಕದಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ಹೆಸರಾಂತ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಪಡೆದುಕೊಂಡಿದೆ.

12th ಫೇಲ್‍ ಚಿತ್ರ ಅನುರಾಗ್‍ ಪಾಠಕ್‍ ಅವರ ಕಾದಂಬರಿಯನ್ನು ಆಧರಿಸಿದೆ. ಹಲವು ಅಡೆತಡೆಗಳನ್ನು ದಾಟಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಐಪಿಎಸ್ ಅ‍ಧಿಕಾರಿ ಮನೋಜ್‍ ಕುಮಾರ್ ಶರ್ಮಾ ಜೀವನವನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

ಚಿಕ್ಕವಯಸ್ಸಿನಿಂದ ವಿಧು ವಿನೋದ್ ಚೋಪ್ರಾ ಅವರ ಚಿತ್ರಗಳನ್ನು ನೋಡುತ್ತಾ ಬೆಳೆದವನು ನಾನು, ಎಂದು ಮಾತು ಆರಂಭಿಸಿದ ಕೆ.ಆರ್.ಜಿ ಸಂಸ್ಥೆಯ ಕಾರ್ತಿಕ್ ಗೌಡ ಅವರು, ಈ ಚಿತ್ರವನ್ನು ಕರ್ನಾಟಕದಾದ್ಯಂತ ನಾವು ಸುಮಾರು 100 ಕ್ಕೂ ಅಧಿಕ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ರೋಹಿತ್ ಪದಕಿ ಅವರ ಸಾರಥ್ಯದಲ್ಲಿ ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಲಾಗಿದೆ. ಕನ್ನಡದ ಹಾಡುಗಳನ್ನು ಕೇಳಿ ನಿರ್ದೇಶಕರು ಸಂತೋಷ ಪಟ್ಟಿದ್ದಾರೆ. ನಮ್ಮ ಮುಂದಿನ ಚಿತ್ರಗಳನ್ನು ಕೆ.ಆರ್.ಜಿ ಸ್ಟುಡಿಯೋಸ್ ಮೂಲಕವೇ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ವಿಧು ವಿನೋದ್ ಚೋಪ್ರಾ ಅವರಿಗೆ ಧನ್ಯವಾದ. ಸದಭಿರುಚಿಯ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಉತ್ತಮ ಸಂದೇಶವುಳ್ಳ ಚಿತ್ರವನ್ನು ವಿತರಣೆ ಮಾಡುತ್ತಿರುವುದಕ್ಕೆ ಖುಷಿಯಾಗಿದೆ ಎಂದು ಕೆ.ಆರ್.ಜಿ ಸಂಸ್ಥೆಯ ಯೋಗಿ ಜಿ ರಾಜ್ ತಿಳಿಸಿದರು.

ನಾನು ಈವರೆಗೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ಈ ಚಿತ್ರದ ಪಾತ್ರ ತುಂಬಾ ಚೆನ್ನಾಗಿದೆ. ವಿಧು ವಿನೋದ್ ಚೋಪ್ರಾ ಅವರು ಕರೆ ಮಾಡಿ ನೀವು ಈ ಚಿತ್ರದಲ್ಲಿ ನಟಿಸಬೇಕು ಎಂದಾಗ ತುಂಬಾ ಸಂತೋಷವಾಯಿತು. ಅಸಾಧ್ಯವನ್ನು ಸಾಧ್ಯವಾಗಿಸಿದ ಐ.ಪಿ.ಎಸ್ ಮನೋಜ್ ಕುಮಾರ್ ಶರ್ಮ ಅವರ ಜೀವನ್ನಾಧಾರಿತ ಈ ಚಿತ್ರದಲ್ಲಿ ಅಭಿನಯಿಸಿರುವುದು ನಿಜಕ್ಕೂ ಹೆಮ್ಮೆ ಎನ್ನುತ್ತಾರೆ ನಾಯಕ ವಿಕ್ರಾಂತ್ ಮಾಸ್ಸೆ.

ಮಾಡಲಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಮೇಧಾ ಶಂಕರ್ ಈ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ‌. ಉತ್ತಮ ಸಂದೇಶವಿರುವ ಈ ಚಿತ್ರದಲ್ಲಿ ನಟಿಸಿರುವುದು ಸಂತೋಷವಾಗಿದೆ ಎಂದು ಮೇಧಾ ಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Spread the love

Continue Reading
Click to comment

Leave a Reply

Your email address will not be published. Required fields are marked *