Television News

ರಾಜ್ಯಸಭಾ ಚುನಾವಣೆ ಫಲಿತಾಂಶ: ಬೇಸರ ಹೊರ ಹಾಕಿದ ಡಿಕೆಶಿ

Published

on

ಬೆಂಗಳೂರು: ನನಗೆ ಜಾತ್ಯಾತೀತ ಶಕ್ತಿಗಳೆಲ್ಲಾ ಒಂದಾಗುತ್ತದೆ ಎನ್ನುವ ವಿಶ್ವಾಸವಿತ್ತು. ಜೆಡಿಎಸ್ ನವರು ನಮಗೆ ಬೆಂಬಲ ಕೊಡಬಹುದು ಎಂಬ ನಿರೀಕ್ಷೆಯಲ್ಲಿದ್ದೆವು. ಅದೇ ರೀತಿ ನಾವು ಅವರಿಗೆ ಬೆಂಬಲ ಕೊಡಬಹುದು ಎನ್ನುವ ನಿರೀಕ್ಷೆಯಲ್ಲಿ ಅವರಿದ್ದರು. ಆದರೆ ಅದು ಆಗಲಿಲ್ಲ ಎಂದು ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.
ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೂರು ಸ್ಥಾನ ಹಾಗೂ ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ. ಆ ಮೂಲಕ, ಜೆಡಿಎಸ್-ಕಾಂಗ್ರೆಸ್ಸಿನ ಜಿದ್ದಿನ ಲಾಭವನ್ನು ಬಿಜೆಪಿ ಪಡೆದುಕೊಂಡಿದ್ದು ಈ ಕುರಿತಾಗಿ ಡಿಕೆಶಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಬಿಜೆಪಿಯವರು ಆಪರೇಶನ್ ಕಮಲದ ಮೂಲಕ ನಮ್ಮ ಶಾಸಕರನ್ನು ಸೆಳೆದುಕೊಂಡರು. ಇಲ್ಲದಿದ್ದರೆ ಅವರಿಗೆ ಒಂದು ಸ್ಥಾನ ಮಾತ್ರ ಗೆಲ್ಲಲು ಸಾಧ್ಯವಾಗುತ್ತಿತ್ತು. ಎಲ್ಲರಿಗೂ ಸ್ವಾಭಿಮಾನ ಎನ್ನುವುದು ಇರುತ್ತದೆ, ಈಗ ಅದನ್ನೆಲ್ಲಾ ಚಿಂತಿಸಿ ಪ್ರಯೋಜನವಿಲ್ಲ. ಈ ಹಿಂದಿನ ಚುನಾವಣೆಯಲ್ಲೂ ಹೊಂದಾಣಿಕೆಯ ಕೊರತೆಯಾಗಿತ್ತು. ಈ ಬಗ್ಗೆ ಮಾತನಾಡಿ ಹೆಚ್ಚಿನ ಪ್ರಯೋಜನವಾಗುವುದಿಲ್ಲ ಎಂದರು.

Spread the love
Click to comment

Copyright © 2019 PopcornKannada.com