Cinema News
‘100’ರಲ್ಲಿ ಪೊಲೀಸ್ ಆದ ರಮೇಶ್ ಅರವಿಂದ್

ಸ್ಯಾಂಡಲ್ವುಡ್ನ ಎವರ್ಗ್ರೀನ್ ನಟ ರಮೇಶ್ ಅರವಿಂದ್ ಈಗ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅರ್ಥಾತ್ ‘100’ ಎಂಬ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರವನ್ನು ಅವರೇ ನಿರ್ದೆಶನ ಸಹ ಮಾಡಲಿದ್ದು, ಪಡ್ಡೆ ಹುಲಿ ನಿರ್ಮಾಪಕ ರಮೇಶ್ ರೆಡ್ಡಿ ಹಣ ಹಾಕುತ್ತಿದ್ದಾರೆ. ಇತ್ತೀಚೆಗಷ್ಟೇ ಶಿವಾಜಿ ಸುರತ್ಕಲ್ ಎಂಬ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಲ್ಲಿ ನಟಿಸಿದ್ದ ರಮೇಶ್ ಈಗ ‘100’ರಲ್ಲಿ ಪೊಲೀಸ್ ಆಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅವರು ಹೊಸ ರೀತಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ನಡೆಯುವ ಕ್ರೈಂನ್ನು ಆಧರಿಸಿದೆ.

ಸ್ಯಾಂಡಲ್ ವುಡ್ ನ ಸದ್ಯದ ಬಹು ಬೇಡಿಕೆಯ ನಟಿ ರಚಿತಾ ರಾಮ್ ಅವರು ಈ ಚಿತ್ರದಲ್ಲಿ ಒಂದು ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರದ ಮುಹೂರ್ತ ಮೊನ್ನೆ ಬೆಂಗಳೂರಿನ ಬನಶಂಕರಿಯಲ್ಲಿರುವ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.


Continue Reading