Connect with us

Cinema News

ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟ ನ್ಯಾಷನಲ್ ಕ್ರಷ್​​​​​ ರಶ್ಮಿಕಾ ಮಂದಣ್ಣ ಹೊಸ ಪೋಸ್ಟರ್ ರಿಲೀಸ್

Published

on

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿ ರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ಟಾಲಿವುಡ್ ನಲ್ಲೂ ಬೇಡಿಕೆ ಹೆಚ್ಚಿಸಿಕೊಂಡಿರೋ ಕಿರಿಕ್ ಬ್ಯೂಟಿ ಬಾಲಿವುಡ್ ನಲ್ಲೂ ಚಾಪೂ ಮೂಡಿಸ್ತಿದ್ದಾರೆ. ಈ ಮಧ್ಯೆ ಮಲಯಾಳಂ ಚಿತ್ರರಂಗಕ್ಕೂ ರಶ್ಮಿಕಾ ಎಂಟ್ರಿಕೊಟ್ಟಿದ್ದಾರೆ.

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳ ಜೊತೆಗೆ ಇದೀಗ ಮಲಯಾಳಂಗೂ ಎಂಟ್ರಿಕೊಟ್ಟಿದ್ದಾರೆ. ಮಲಯಾಳಂನ ಖ್ಯಾತ ನಟ ದುಲ್ಕರ್ ಸಲ್ಮಾನ್ ನಟನೆಯ ಸೀತಾ ರಾಮಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಗೆ ಮೃಣಾಲ್ ಠಾಕೂರ್ ಜೋಡಿಯಾಗಿ ನಟಿಸುತ್ತಿದ್ದು, ರಶ್ಮಿಕಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಅಂದ ಹಾಗೆ ರಶ್ಮಿಕಾ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದು ಚಿತ್ರತಂಡ ರಶ್ಮಿಕಾರ ಲುಕ್ ರಿವೀಲ್ ಮಾಡಿದೆ.

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಸೀತಾ ರಾಮಂ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಚಿತ್ರತಂಡ ಬಿಡುಗಡೆ ಮಾಡಿರುವ ಪೋಸ್ಟರ್‌ನಲ್ಲಿ ರಶ್ಮಿಕಾ ಹಿಜಾಬ್ ಧರಿಸಿ ಮುಸ್ಲಿಂ ಹುಡುಗಿಯಾಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಸೇನಾಧಿಕಾರಿಯಾಗಿ ಕಾಣಿಸಿಕೊಳ್ತಿದ್ದು, ಬ್ರಿಗೇಡಿಯರ್ ವಿಷ್ಣು ಶರ್ಮಾ ಪಾತ್ರದಲ್ಲಿ ಸುಮಂತ್ ನಟಿಸುತ್ತಿದ್ದಾರೆ. ಆಗಸ್ಟ್ 5ರಂದು ಸೀತಾ ರಾಮಂ ಸಿನಿಮಾ ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ತೆರೆಗೆ ಬರಲಿದೆ.

Spread the love

Continue Reading
Click to comment

Leave a Reply

Your email address will not be published. Required fields are marked *