Television News
ಸಿಧು ಮೂಸೆವಾಲ ಹತ್ಯೆ ಪ್ರಕರಣ: ಗೋಲ್ಡೀ ಬ್ರಾರ್ ವಿರುದ್ಧ ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೊಟೀಸ್

ನವದೆಹಲಿ: ಪಂಜಾಬ್ ನ ಖ್ಯಾತ ಗಾಯಕ ಸಿಧು ಮೂಸವಾಲ ಹತ್ಯೆ ಪ್ರಕರಣದಲ್ಲಿ ಸತೀಂದರ್ ಜಿತ್ ಸಿಂಗ್ ಅಲಿಯಾಸ್ ಗೋಲ್ಡೀ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿಗೊಳಿಸಲಾಗಿದೆ.
ಗೋಲ್ಡೀ ಬ್ರಾರ್ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಹೊಣೆ ಹೊತ್ತಿದ್ದು, ಸಿಬಿಐ ಮನವಿ ಹಿನ್ನೆಲೆಯಲ್ಲಿ ಗೋಲ್ಡೀ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿಗೊಳಿಸಿದೆ.
ಕೆನಡಾದಲ್ಲಿ ವಾಸವಿರುವ ಗೋಲ್ಡ ಬ್ರಾರ್ ವಿರುದ್ಧ ಪಂಜಾಬ್ ಪೊಲೀಸರು ಈ ಹಿಂದಿನ ಎರಡು ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರೆಡ್ ಕಾರ್ನರ್ ನೋಟೀಸ್ ಜಾರಿಗೊಳಿಸಿದ್ದಾರೆ.
ಗೋಲ್ಡೀ ಬ್ರಾರ್ ಶ್ರೀಮುಕ್ತ್ಸರ್ ಸಾಹೀಬ್ ನ ಮೂಲದವನಾಗಿದ್ದು, 2017 ರಲ್ಲಿ ವಿದ್ಯಾರ್ಥಿ ವೀಸಾ ಪಡೆದು ಕೆನಡಾಗೆ ತೆರಳಿದ್ದು ಈತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯನಾಗಿದ್ದಾನೆ.

Continue Reading