Connect with us

Cinema News

ಬೆಂಗಳೂರು ಅಂತಾರಾಷೀಯ ಚಿತ್ರೋತ್ಸವಕ್ಕೆ ಧಾರ್ಮಿಕ ರಂಗು ಧರ್ಮಗುರುಗಳ ಉಪಸ್ಥಿತಿಯ ಹೊಸ ಇತಿಹಾಸ

Published

on

ಬೆಂಗಳೂರು : ಅಂತಾರಾಷೀಯ ಪಿಯಾಫೆ ಮಾನ್ಯತೆ ಪಡೆದ ಹಿರಿಮೆಯ 13ನೇ ಬೆಂಗಳೂರು ಅಂತಾರಾಷೀಯ ಚಿತ್ರೋತ್ಸವ ಇದೀಗ ಧರ್ಮಗುರುಗಳ ಸಮಕ್ಷಮದ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.
ಅಂತಾರಾಷೀಯ ಚಿತ್ರೋತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪ್ರಮುಖ ಧರ್ಮಪೀಠದ ಜಗದ್ಗುರುಗಳು ಸಿನಿಮೋತ್ಸವದಲ್ಲಿ ಭಾಗಿಯಾಗುವ ಮೂಲಕ ಹೊಸಯುಗವೊಂದಕ್ಕೆ ನಾಂದಿ ಹಾಡಿದೆ.

ಮೈಸೂರಿನ ಪ್ರತಿಷ್ಠಿತ ಸುತ್ತೂರು ಶ್ರೀಮಠದ ಸಾವಿರ ವರ್ಷಗಳ ಇತಿಹಾಸವನ್ನು ಕಟ್ಟಿಕೊಟ್ಟಿರುವ `ಸುತ್ತೂರು ಶ್ರೀಮಠ ಗುರು ಪರಂಪರೆ’ ಆನಿಮೇಷನ್‌ ಚಿತ್ರ ಪ್ರದರ್ಶನಕ್ಕೆ ಮಂಗಳವಾರ ಬೆಂಗಳೂರು ಅಂತಾರಾಷೀಯ ಚಿತ್ರೋತ್ಸವ ಕಣ್ಣಾಯಿತು.
ಅಮೆರಿಕ, ಜಪಾನ್‌, ಇಟಲಿಯಲ್ಲಿ ಪ್ರದರ್ಶನಗೊಂಡು ಬಹುಮಾನಗಳಿಗೆ ಸತ್ಪಾತ್ರವಾಗಿರುವ ಈ ವಿಶಿಷ್ಟ ಆನಿಮೇಷನ್‌ ಚಿತ್ರ ಪ್ರದರ್ಶನದಲ್ಲಿ ಸುತ್ತೂರು ಶ್ರೀಮಠದ ಜಗದ್ಗುರು ಶಿವಮೂರ್ತಿ ದೇಶಿಕೇಂದ್ರ ಸಾಮೀಜಿಗಳು, ತುಮಕೂರಿನ ಸದ್ದಿಗಂಗಾ ಮಠದ ಸಿದ್ಧಲಿಂಗ ಶ್ರೀಗಳು ಹಾಗೂ ಬೆಂಗಳೂರಿನ ಹಲವು ಮಠಗಳ ಧಾರ್ಮಿಕ ಗುರುಗಳು ಪಾಲ್ಗೊಂಡು ಚಿತ್ರವೀಕ್ಷಿಸುವ ಮೂಲಕ ಹೊಸ ದಾರಿಗೆ ಮುನ್ನುಡಿ ಬರೆದರು.
ಈ ಸಂದರ್ಭದಲ್ಲಿ ಸುತ್ತೂರಿನ ಶಿವಮೂರ್ತಿ ದೇಶೀಕೇಂದ್ರ ಸಾಮೀಜಿಗಳು ಮಾತನಾಡಿ,ಶ್ರೀಮಠದ ಧಾರ್ಮಿಕ ಪರಂಪರೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ತೋರ್ಪಡಿಸುವುದು ಸುಲಭದ ಕೆಲಸವಲ್ಲ. ಅದನ್ನು ನಿರ್ದೇಶಕರಾದಿಯಾಗಿ ಚಿತ್ರತಂಡ ನಾಲ್ಕು ವರ್ಷಗಳ ಸತತ ಪರಿಶ್ರಮದ ಫಲವಾಗಿ ಆಗುಮಾಡಿಕೊಟ್ಟಿದೆ. ವಿದೇಶಗಳಲ್ಲಿ ಪ್ರದರ್ಶಿತಗೊಂಡು ಪ್ರಶಸ್ತಿಗಳಿಗೆ ಪಾತ್ರವಾದ ಈ ಚಿತ್ರ ಭಾರತದಲ್ಲೇ ಇದೇ ಮೊದಲ ಬಾರಿಗೆ ಅದರಲ್ಲೂ ಬೆಂಗಳೂರು ಅಂತಾರಾಷೀಯ ಚಿತ್ರೋತ್ಸವದಲ್ಲಿ ಪ್ರದರ್ಶಿತಗೊಂಡಿರುವುದು ಸಂತಸದ ಸಂಗತಿ. ಅದಕ್ಕಾಗಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್‌ ಪುರಾಣಿಕ್‌ ಅಭಿನಂದನಾರ್ಹರು ಎಂದು ಮೆಚ್ಚುಗೆಯ ಆಶೀರ್ವಚನ ನೀಡಿದರು.

ತುಮಕೂರು ಸಿದ್ಧಗಂಗಾ ಮಠದ ಶ್ರೀ ಸದ್ದಿಲಿಂಗ ಸಾಮೀಜಿ ಮಾತನಾಡಿ, ಈ ಆನಿಮೇಷನ್‌ ಚಿತ್ರವು ಕೇವಲ ಸುತ್ತೂರು ಮಠದ ಪರಂಪರೆಯ ಚಿತ್ರಣ ಮಾತ್ರವಾಗಿರದೆ ಕನ್ನಡ ನಾಡಿನ ಶರಣ ಸಂಸ್ಕೃತಿ, ದಾಸೋಹ ಸಂಸ್ಕೃತಿ, ಸಹಬಾಳೆ ಸಂಸ್ಕೃತಿಯ ದರ್ಶನವಾಗಿದೆ. ಯುದ್ಧದ ಕರಿನೆರಳು ಎಲ್ಲರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಶಾಂತಿ, ಸೌಹಾರ್ದತೆ ಸಾರುವ ಇಂತಹ ಚಿತ್ರಗಳು ಹೆಚ್ಚು ಪ್ರದರ್ಶನಗೊಳ್ಳಬೇಕು. ಸುನಿಲ್‌ ಪುರಾಣಿಕ್‌ ಅಂತಹ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದು, ಅಂತಾರಾಷೀಯ ಚಿತ್ರೋತ್ಸವ ವೇದಿಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್‌ ಪುರಾಣಿಕ್‌ ಮಾತನಾಡಿ, ಚಿತ್ರೋತ್ಸವಕ್ಕೆ ಹೊಸದೊಂದು ಆಯಾಮ ಸಿಕ್ಕಂತಾಗಿದ್ದು ಇದು ಇತಿಹಾಸದಲ್ಲೇ ಮೊದಲೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ಚಿತ್ರಪ್ರದರ್ಶನದಲ್ಲಿ ಜಾನಪದತಜ್ಞ ಗೊ.ರು.ಚನ್ನಬಸಪ್ಪ, ಹಿರಿಯ ಚಿತ್ರನಿರ್ಮಾಪಕ ಎಸ್‌.ಎ.ಚೆನ್ನೇಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ.ಜಯರಾಜ್‌, ಆನಿಮೇಷನ್‌ ಚಿತ್ರದ ನಿರ್ದೇಶಕ ಅಬ್ದುಲ್‌ ಕರೀಂ, ಹಲವು ಹಿರಿಯ ಐಎಎಸ್‌ ಹಾಗೂ ಐಎಫ್‌ಎಸ್‌ ಅಧಿಕಾರಿಗಳು ಸೇರಿದಂತೆ ಅಪಾರ ಜನಸ್ತೋಮ ಪಾಲ್ಗೊಂಡು ಧಾರ್ಮಿಕ ಸಂಭ್ರಮದಲ್ಲಿ ಮಿಂದೆದ್ದಿದ್ದು ವಿಶೇಷವಾಗಿತ್ತು.

Spread the love

Continue Reading
Click to comment

Leave a Reply

Your email address will not be published. Required fields are marked *