Cinema News
ರೋಹಿತ್ ಪದಕಿ ನಿರ್ದೇಶನದ ಚಿತ್ರದಲ್ಲಿ ರಿಷಬ್ ಶೆಟ್ಟಿ
‘ಬೆಲ್ ಬಾಟಂ’ ಚಿತ್ರದ ಯಶಸ್ಸಿನ ನಂತರ ರಿಷಬ್ ಶೆಟ್ಟಿ ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಇದರ ನಡುವೆಯೇ ‘ದಯವಿಟ್ಟು ಗಮನಿಸಿ’ ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ರೋಹಿತ್ ಪದಕಿ ನಿರ್ದೇಶನದ ಹೊಸ ಚಿತ್ರದಲ್ಲಿ ಸತಿಸುತ್ತಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಹೌದು, ರೋಹಿತ್ ನಿರ್ದೇಶನದಲ್ಲಿ ಮೂಡಿಬರಲಿರುವ ‘ಮಹಾನಿಯರೇ ಮಹಿಳೆಯರೇ’ ಚಿತ್ರದಲ್ಲಿ ರಿಶಬ್ ಶೆಟ್ಟಿ ನಟಿಸಲಿದ್ದಾರೆ. ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್‌ನಲ್ಲಿ ಶುರುವಾಗುವ ಸಾಧ್ಯತೆಗಳಿವೆ.
ದಯವಿಟ್ಟು ಗಮನಿಸಿ ಚಿತ್ರವನ್ನು ನಿರ್ಮಿಸಿದ್ದ ಕೃಷ್ಣ ಸಾರ್ಥಕ್ ಅವರೇ ಈ ಚಿತ್ರಕ್ಕೂ ಬಂಡವಾಳ ಹೂಡಲಿದ್ದಾರೆ.