Cinema News
ಸ್ಯಾಂಡಲ್ ವುಡ್ ಗೆ ‘ಸದಸ್ಯ’ ಎಂಟ್ರಿ…ಹೊಸಬರ ಪ್ರಯತ್ನದ ಕಾಮಿಡಿಕಥಾಹಂದರ ಚಿತ್ರ ಸದಸ್ಯ

ಕನ್ನಡದಲ್ಲಿ ಹೊಸ ಹೊಸ ಪ್ರತಿಭೆಗಳ ಅನಾವರಣವಾಗ್ತಿದೆ. ಆದ್ರೆ ಕಂಟೆಂಟ್ ಗಟ್ಟಿಯಾಗಿ ಇದ್ದವರು ಮಾತ್ರ ಇಲ್ಲಿ ನೆಲೆಯೂರ್ತಾರೆ. ಈಗ ಅದೇ ಗಟ್ಟಿ ಭರವಸೆಯೊಂದಿಗೆ ಹೊಸಬರ ತಂಡವೊಂದು ಎಂಟ್ರಿಕೊಡ್ತಿದೆ. ಯುಗಾದಿ ಹಬ್ಬದ ಪ್ರಯುಕ್ತ ಸಿನಿಮಾದ ಟೈಟಲ್ ನ್ನು ರಿವೀಲ್ ಮಾಡಿದೆ.

ಮೂಲತಃ ಇಂಜಿನಿಯರಿಂಗ್ ಆಗಿರುವ ಶ್ರೀಕಾಂತ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಹೊಸ ಸಿನಿಮಾ ಸದಸ್ಯ. ಈಗಾಗಲೇ ವಾರ್ಡ್ ನಂಬರ್ 11 ಸಿನಿಮಾ ಮೂಲಕ ನಿರ್ದೇಶಕರಾಗಿರುವ ಶ್ರೀಕಾಂತ್ ಕಿರು ಚಿತ್ರಗಳ ಮೂಲಕ ಬಣ್ಣದ ಬದುಕು ಆರಂಭಿಸಿ ಈಗ ಪೂರ್ಣಪ್ರಮಾಣ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಸದಸ್ಯ ಶ್ರೀಕಾಂತ್ ನಿರ್ದೇಶನದ ಎರಡನೇ ಸಿನಿಮಾವಾಗಿದ್ದು, ಯುಗಾದಿ ಸ್ಪೆಷಲ್ ಆಗಿ ಚಿತ್ರತಂಡದ ಟೈಟಲ್ ಅನಾವರಣ ಮಾಡಿದೆ ಚಿತ್ರತಂಡ.
ಕಾಮಿಡಿ ಹೂರಣ ಒಳಗೊಂಡಿರುವ ಸದಸ್ಯ ಸಿನಿಮಾವನ್ನು ಪ್ರೊಡಕ್ಷನ್ ಫೀನಿಕ್ಸ್ ಎಂಟರ್ ಟೈನ್ ಮೆಂಟ್ ನಡಿ ಅನಿಲ್ ಕುಮಾರ್ ನಿರ್ಮಾಣ ಮಾಡ್ತಿದ್ದು, ಒಂದಷ್ಟು ಹೊಸ ಪ್ರತಿಭೆಗಳು, ಹಸಿವಿರುವ ಕಲಾವಿದರಿಗೆ ಅವಕಾಶ ನೀಡಲಿದೆ ಚಿತ್ರತಂಡ. ಸದ್ಯ ಟೈಟಲ್ ರಿವೀಲ್ ಮಾಡಿದ್ದು, ಮೇನಿಂದ ಚಿತ್ರೀಕರಣಕ್ಕೆ ಸಜ್ಜಾಗಿದ್ದು, ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲಿಯೇ ರಿವೀಲ್ ಮಾಡಲಿದೆ.
