Cinema News
ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಬಾಯ್ ಕಾಟ್ ಮಾಡಲು ಒತ್ತಾಯ
ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಹಾಗೂ ರಾಣಾ ದಗ್ಗುಬಾಟಿ ನಟನೆಯ ವಿರಾಟ ಪರ್ವಂ ಸಿನಿಮಾ ಇಂದು ರಿಲೀಸ್ ಆಗಿದೆ. ನಕ್ಸಲ್ ಕಥೆಯನ್ನ ಹಿನ್ನೆಲೆಯಾಗಿಟ್ಟುಕೊಂಡು ಸಿನಿಮಾ ನಿರ್ದೇಶನ ಮಾಡಿದ್ದು ನಕ್ಸಲ್ ಹೋರಾಟದಲ್ಲಿ ಭಾಗಿಯಾದ ಇಬ್ಬರು ಪ್ರೇಮಿಗಳ ಕಥೆ ಹಾಗೂ ಶೋಷಿತ ಸಮಾಜಕ್ಕಾಗಿ ಪ್ರೇಮಿಗಳು ಮಾಡುವ ತ್ಯಾಗವನ್ನ ಚಿತ್ರದಲ್ಲಿ ತೋರಿಸಲಾಗಿದೆ. ಆದರೆ ಇಂದು ರಿಲೀಸ್ ಆಗಿರುವ ವಿರಾಟ ಪರ್ವಂ ಸಿನಿಮಾ ಬೈಕಾರ್ಟ್ ಮಾಡಬೇಕು ಎಂದು ಹಿಂದೂಪರ ಸಂಘಟನೆಗಳು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಈ ಸಿನಿಮಾ ಬೈಕಾಟ್ ಮಾಡುವುದಕ್ಕೆ ಕಾರಣ, ಸಿನಿಮಾದ ಕಟೆಂಟ್ ಅಲ್ಲ. ಬದಲಿಗೆ ಈ ಚಿತ್ರದಲ್ಲಿ ನಟಿಸಿದ ನಾಯಕಿ ಸಾಯಿ ಪಲ್ಲವಿ ಅವರ ಹೇಳಿಕೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡುತ್ತಾ, ಆ ಕಾಲದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಹತ್ಯೆ ಮಾಡಲಾಗಿದೆ ಎಂದು ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ಅದನ್ನು ನೀವು ಒಂದು ಧಾರ್ಮಿಕ ಸಂಘರ್ಷ ಎನ್ನುವುದಾದರೆ, ಇತ್ತೀಚೆಗೆ ಗೋವು ಸಾಗಿಸುತ್ತಿದ್ದ ವೇಳೆ ಮುಸ್ಲಿಂ ಡ್ರೈವರ್ ಮೇಲೆ ಹಲ್ಲೆ ನಡೆಸಿ ಜೈ ಶ್ರೀರಾಮ್ ಎಂದು ಹೇಳುವಂತೆ ಬಲವಂತ ಮಾಡಲಾಗಿತ್ತು. ಈ ಎರಡು ಘಟನೆಗಳ ನಡುವೆ ವ್ಯತ್ಯಾಸ ಎಲ್ಲಿದೆ? ಎಂದು ಪ್ರಶ್ನಿಸಿದ್ದರು.
ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ. ಇವರ ಮಾತಿಗೆ ಕೆಲವರು ಮೆಚ್ಚಿಕೊಂಡರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.