Television News
ಸಾವರ್ಕರ್ ಫೋಟೋ ವಿವಾದ: ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಕಾಲೇಜು ಆಡಳಿತ ಮಂಡಳಿ

ಮಂಗಳೂರು: ವಿವಿ ಕಾಲೇಜಿನಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ನಡೆದ ಗಲಾಟೆಗೆ ಸಂಬಧಿಸಿದ್ದಂತೆ ಇದೀಗ ಆರು ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ಆಡಳಿತ ಮಂಡಳಿ ನೀಡಿದ ದೂರಿನ ಮೇರೆಗೆ ಮರ್ಕಜ್, ಅಬೂಬುಕ್ಕರ್ ಸಿದ್ಧಿಕಿ, ಮಹಮ್ಮದ್ ಹಫೀಜ್, ಪ್ರಜನ್, ಸ್ವಸ್ತಿಕ್ ಮತ್ತು ಗುರುಕಿರಣ್ ಎಂಬ ವಿದ್ಯಾರ್ಥಿಗಳ ಮೇಲೆ ಕೇಸು ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಿನ್ನೆ(ಜೂ11) ಮಧ್ಯಾಹ್ನ ಸಾವರ್ಕರ್ ಫೋಟೋ ವಿಚಾರದಲ್ಲಿ ಪ್ರಾಂಶುಪಾಲರಿಗೆ ದೂರು ನೀಡಿದ್ದ ವಿದ್ಯಾರ್ಥಿಗಳ ಮೇಲೆ ಇತರೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಫ್ಐ, ಎನ್ಎಸ್ಯುಐ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

Continue Reading