Cinema News

‘ಸೆಪ್ಟೆಂಬರ್ 10’ ಈ ವಾರ ತೆರೆಗೆ

Published

on

ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಸಾಯಿಪ್ರಕಾಶ್ ಅವರು ನಿರ್ದೇಶನ ಮಾಡಿರುವ ಚಿತ್ರ ‘ಸೆಪ್ಟೆಂಬರ್ 10’ ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲಿ ಅಂದರೆ ಸೆ.12 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ನಟ, ನಿರ್ಮಾಪಕ ಕಮಲ್ ಅವರು ಈ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.

 

 

 

 

ಈ ಚಿತ್ರಕ್ಕೆ ಡಾ.ರಾಜು ಅಲ್ಲದೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿವೆ.
ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ. ಸಾಯೋದು ಸುಲಭವಲ್ಲ, ಅದೇ ಧೈರ್ಯವನ್ನು ಓದಲು,ಬದುಕಲು ಮಾಡಿ ಎಂಬ ಸಂದೇಶ ಚಿತ್ರದಲ್ಲಿದೆ. ಇದು ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರ.

 

 

 

 

ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ನಿರ್ಮಿಸಿರುವ ಈ ಚಿತ್ರದಲ್ಲಿ ಹಿರಿಯನಟ ಶಶಿಕುಮಾರ್, ರಮೇಶ್ ಭಟ್, ಗಣೇಶ ರಾವ್ ಕೇಸರಕರ್,
ಶ್ರೀರಕ್ಷಾ, ಶಿವಕುಮಾರ್ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ. ಜೆಜಿ. ಕೃಷ್ಣ ಚಿತ್ರದ ಛಾಯಾಗ್ರಾಹಕರು. ಮ್ಯೂಸಿಕ್ ಬಜಾರ್ ಈ ಚಿತ್ರದ ಹಾಡುಗಳನ್ನ ಹೊರತಂದಿದೆ.

 

Spread the love
Click to comment

Copyright © 2019 PopcornKannada.com