Connect with us

Cinema News

ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ .

Published

on

ಆರ್.ಚಂದ್ರು ನಿರ್ದೇಶನದ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ಹಲವು ವಿಶೇಷಗಳಿಂದ ಕೂಡಿದೆ. ವಿಶ್ವದಾದ್ಯಂತ ಎಲ್ಲರ‌ ಗಮನ ಸೆಳೆದಿರುವ ಈ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಚಿತ್ರತಂಡದಿಂದ ಮತ್ತೊಂದು ಮಹತ್ತರವಾದ ವಿಷಯ ಹೊರಬಂದಿದೆ.‌ ತಮ್ಮ ಅಮೋಘ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ” ಕಬ್ಜ ” ಚಿತ್ರದಲ್ಲಿ ನಟಿಸಿದ್ದಾರೆ. ಉಪೇಂದ್ರ, ಸುದೀಪ್ ಹಾಗೂ ಶಿವರಾಜಕುಮಾರ್ ಮೂವರು ನಟರನ್ನು ಒಂದೇ ಚಿತ್ರದಲ್ಲಿ ನೋಡುತ್ತಿರುವುದು ಅಭಿಮಾನಿಗಳ ಪಾಲಿಗಂತೂ ದೊಡ್ಡ ಹಬ್ಬವೇ ಸರಿ. ಮಾರ್ಚ್ 4 ರಂದು ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಏಕಕಾಲಕ್ಕೆ ಎಲ್ಲಾ‌ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಮಾರ್ಚ್ 17 ರಂದು ವಿಶ್ವದಾದ್ಯಂತ ತೆರೆ‌ ಕಾಣಲಿದೆ.

Spread the love

Continue Reading
Click to comment

Leave a Reply

Your email address will not be published. Required fields are marked *