Connect with us

Cinema News

ಅಧಿಕ ಮೊತ್ತಕ್ಕೆ ಮಾರಾಟವಾಯಿತು “ಮಾರ್ಟಿನ್” ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು .

Published

on

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ಮಾರ್ಟಿನ್” ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ (ಒಂಭತ್ತು ಕೋಟಿ ರೂಪಾಯಿ) ಮಾರಾಟವಾಗಿದೆ. ಜನಪ್ರಿಯ ಆಡಿಯೋ ಸಂಸ್ಥೆಯಾದ “ಸರೆಗಮ”, ” ಮಾರ್ಟಿನ್ ” ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

“ನನಗೆ ತಿಳಿದ ಇಷ್ಟು ದೊಡ್ಡ ಮೊತ್ತಕ್ಕೆ ಯಾವುದೇ ಚಿತ್ರದ ಆಡಿಯೋ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿಲ್ಲ” ನಮ್ಮ ಚಿತ್ರದ ಆಡಿಯೋ ರೈಟ್ಸ್ ಈ ಬಾರಿ ಮೊತ್ತಕ್ಕೆ ಮಾರಾಟವಾಗಿರುವುದು ತುಂಬಾ ಖುಷಿಯಾಗಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ ಎಂದು ನಿರ್ಮಾಪಕ ಉದಯ್ ಕೆ ಮೆಹ್ತಾ ತಿಳಿಸಿದ್ದಾರೆ.

ಎ.ಪಿ.ಅರ್ಜುನ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್ ನಲ್ಲಿ ಮೂಡಿಬರಿತ್ತಿರುವ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ “ಮಾರ್ಟಿನ್” ಚಿತ್ರದ ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಮುಂತಾದವರಿದ್ದಾರೆ.

Spread the love

Continue Reading