Connect with us

Cinema News

ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್

Published

on

ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ ಚಿತ್ರ ತಂಡ. ಚಾಮುಂಡೇಶ್ವರಿ ಸ್ಟುಡಿಯೋ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾಮ ಹರೀಶ್ ಹಾಗೂ ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು.

ವೇದಿಕೆಯಲ್ಲಿ ನಿರ್ಮಾಪಕರಾದ ರೆಡ್ ಅಂಡ್ ವೈಟ್ ಸೆವೆನ್ ರಾಜ್ , ಶಿಲ್ಪಾ ಶ್ರೀನಿವಾಸ್ ನಿರ್ಮಾಪಕ ರಾಜು ಕಲ್ಕುಣಿ ಸಿವಿಜಿ ಪಬ್ಲಿಕೇಶನ್, ಚಂದ್ರು ಹಾಗೂ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು ಸದ್ದಿಲ್ಲದೆ ಕುಂಬಳಕಾಯಿಯನ್ನು ಒಡೆದು ಮುಗಿಸಿರುವುದಾಗಿಯೂ ನಿರ್ಮಾಪಕ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ಹೇಳಿಕೊಂಡರು.

ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಮುಗಿಯುವ ಹಂತದಲ್ಲಿದ್ದು ಜೂನ್ ತಿಂಗಳಲ್ಲಿ ಚಿತ್ರ ಸೆನ್ಸರ್ ಬಾಗಿಲಿಗೆ ತೆರಳುವ ಸಾಧ್ಯತೆ ಇದೆ ಎಂದು ನಿರ್ದೇಶಕ ಮತ್ತು ನಟ ಲೋಕೇಂದ್ರ ಸೂರ್ಯ ಹೇಳಿದರು. ಚಿತ್ರದ ನಟಿ ಶ್ರಾವ್ಯ ಮತ್ತೊಂದು ಚಿತ್ರದ ಶೂಟಿಂಗ್ನಲ್ಲಿ ತೊಡಗಿದ್ದ ಕಾರಣ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲವೆಂದು ತಿಳಿಸಿದರು. ಜೂನ್ ತಿಂಗಳಲ್ಲಿ ಅಥಿ ಐ ಲವ್ ಯು ಚಿತ್ರದ ಟ್ರೈಲರ್ ಕೂಡ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ.

Spread the love

Continue Reading
Click to comment

Leave a Reply

Your email address will not be published. Required fields are marked *