Connect with us

Cinema News

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯ. .

Published

on

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಚಿತ್ರೀಕರಣ‌ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ಇತ್ತೀಚೆಗೆ ಎರಡು ಹಾಡುಗಳ ಚಿತ್ರೀಕರಣ ಬ್ಯಾಂಕಾಕ್ ನಲ್ಲಿ ಮುಗಿಸಿರುವ ಚಿತ್ರತಂಡ ಭಾರತಕ್ಕೆ ಮರಳಿದೆ. ಇದರೊಂದಿಗೆ “ದಿ ಡೆವಿಲ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ದರ್ಶನ್ ಅವರು ಸೇರಿದಂತೆ ಎಲ್ಲಾ ಕಲಾವಿದರ ಡಬ್ಬಿಂಗ್ ಸಹ ಪೂರ್ಣವಾಗಿದೆ. ಸದ್ಯದಲ್ಲೇ ಹಾಡೊಂದನ್ನು ಬಿಡುಗಡೆ ಮಾಡುವುದಾಗಿ ತಿಳಿಸಿರುವ ನಿರ್ದೇಶಕರು ಆದಷ್ಟು ಬೇಗ‌ ಚಿತ್ರವನ್ನು ತೆರೆಗೆ ತರುವುದಾಗಿ ಹೇಳಿದ್ದಾರೆ.

ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಹಾಗೂ ಈಗಾಗಲೇ ಬಿಡುಗಡೆಯಾಗಿರುವ ದರ್ಶನ್ ಅವರ ಹೊಸ ಲುಕ್ ಗಳ ಪೋಸ್ಟರ್ ಗಳಿಂದ ಜನಮನಸೂರೆಗೊಂಡಿರುವ “ದಿ ಡೆವಿಲ್” ಚಿತ್ರವನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.

ದರ್ಶನ್ ಅವರಿಗೆ ನಾಯಕಿಯಾಗಿ ರಚನ ರೈ ಅಭಿನಯಿಸಿದ್ದಾರೆ. ತುಳಸಿ,‌ ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Spread the love

Continue Reading
Click to comment

Leave a Reply

Your email address will not be published. Required fields are marked *