Cinema News

“ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ.

Published

on

ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

 

 

 

ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.

 

 

ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್‌ ” ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

 

 

 

ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

 

Spread the love
Click to comment

Copyright © 2019 PopcornKannada.com