Connect with us

Cinema News

ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು .

Published

on

ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions roar” ಹಾಡಿನ ಲಿರಿಕಲ್ ವಿಡಿಯೋ ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು.

ಓರಾಯನ್ ಮಾಲ್ ನ ಆವರಣದಲ್ಲಿರುವ ಕೆರೆಯಂಗಳದಲ್ಲಿ‌ ನಡೆದ ವರ್ಣರಂಜಿತ ಸಮಾರಂಭಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾದರು. “ಮ್ಯಾಕ್ಸ್” ಚಿತ್ರದ ಹಾಡಿಗೆ ಹಾಗೂ ಟ್ರೇಲರ್ ಗೆ ಅಭಿಮಾನಿಗಳು ಫಿದಾ ಆದರು. ಕಿಚ್ಚ ಸುದೀಪ್, ನಿರ್ಮಾಪಕ ಕಲೈಪುಲಿ ಎಸ್ ತನು, ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿಮ್ಮೆನೆಲ್ಲಾ ನೋಡಿ ಬಹಳ ಖುಷಿಯಾಗುತ್ತಿದೆ. ಎರಡುವರೆ ವರ್ಷಗಳ ನಂತರ ಡಿಸೆಂಬರ್ 25 ರಂದು ನನ್ನ ಅಭಿನಯದ “ಮ್ಯಾಕ್ಸ್” ಚಿತ್ರ ಬಿಡುಗಡೆಯಾಗುತ್ತಿದೆ. ತಡವಾಗಿರುವುದಕ್ಕೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ಆದರೆ ನಾವು ಲೇಟಾಗಿ ಬಂದರೂ ಲೇಟೆಸ್ಟಾಗಿ ಬರುತ್ತೇವೆ‌. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕ ಸುದೀಪ್.

ಇಷ್ಟು ಜನ ಸುದೀಪ್ ಅವರ ಅಭಿಮಾನಿಗಳನ್ನು ಕಂಡು ಆನಂದವಾಗುತ್ತಿದೆ ಎಂದು ಮಾತು ಆರಂಭಿಸಿದ ನಿರ್ಮಾಪಕ ಕಲೈಪುಲಿ‌ ಎಸ್ ತನು, ಡಿಸೆಂಬರ್ 25 ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಮ್ಮೆಲ್ಲರ ಬೆಂಬಲವಿರಲಿ ಎಂದರು. ನಿರ್ದೇಶಕ ವಿಜಯ್ ಕಾರ್ತಿಕೇಯ,
ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Spread the love

Continue Reading
Click to comment

Leave a Reply

Your email address will not be published. Required fields are marked *