Cinema News
ಜನವರಿ 29 ರಂದು ಬರಲಿದೆ “ಲೇಡಿಸ್ ಬಾರ್” ಚಿತ್ರದ ಟ್ರೇಲರ್ .

ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ “ಲೇಡಿಸ್ ಬಾರ್” ಚಿತ್ರದ ಟ್ರೇಲರ್ ಜನವರಿ 29 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಹಾಡುಗಳು ಎಲ್ಲರ ಮೆಚ್ಚುಗೆ ಪಡೆದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

“ಲೇಡಿಸ್ ಬಾರ್” ಶೀರ್ಷಿಕೆ ಕೇಳಿದ ತಕ್ಷಣ ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ಈ ಚಿತ್ರದಲ್ಲಿ ಬರೀ ಕುಡಿತವಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಲಾಗಿದಯಂತೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ತೆರೆಗೆ ಬರಲಿದೆ.

ಟಿ.ಎಂ.ಸೋಮರಾಜು ಚಿತ್ರವನ್ನು ನಿರ್ಮಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿದ್ದಾರೆ. ಹರೀಶ್ ರಾಜ್, ಶಿವಾನಿ, ಮೀನಾಕ್ಷಿ, ಮಾಧುರಿ, ಗಣೇಶ್ ರಾವ್, ಆರಾಧ್ಯ , ಪ್ರೇರಣಾ, ಚೈತ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಹರ್ಷ ಕಾಗೋಡ್ ಸಂಗೀತ ನಿರ್ದೇಶನ, ವೀನಸ್ ಮೂರ್ತಿ ಛಾಯಾಗ್ರಹಣ ಹಾಗೂ ಜಗ್ಗು ಮಾಸ್ಟರ್ ನೃತ್ಯ ನಿರ್ದೇಶನ “ಲೇಡಿಸ್ ಬಾರ್” ಚಿತ್ರಕ್ಕಿದೆ.
