Cinema News

ನಿತಿನ್ 32ನೇ ಸಿನಿಮಾಗೆ ಟೈಟಲ್ ಫಿಕ್ಸ್….’ಎಕ್ಸ್ಟ್ರಾಡಿನರಿ ಮ್ಯಾನ್’ಗೆ ಶ್ರೀಲೀಲಾ ನಾಯಕಿ…ಡಿ.23ಕ್ಕೆ ಚಿತ್ರ‌ ಬಿಡುಗಡೆ

Published

on

ತೆಲುಗು ಚಿತ್ರರಂಗದ ಪ್ರಾಮಿಸಿಂಗ್ ಹೀರೋ‌ ನಿತಿನ್ 32ನೇ ಸಿನಿಮಾಗೆ ಟೈಟಲ್ ಫಿಕ್ಸ್ ಮಾಡಲಾಗಿದೆ. ವಕ್ಕಂತಂ ವಂಶಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಎಕ್ಸ್ಟ್ರಾಡಿನರಿ ಮ್ಯಾನ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಪೋಸ್ಟರ್ ನ ಒಂದು‌ ಫೋಟೋದಲ್ಲಿ ನಿತಿನ್ ಗಡ್ಡ, ಕೂದಲು ಬಿಟ್ಟು ರಗಡ್ ಆಗಿ ಕಾಣಿಸಿಕೊಂಡಿದ್ರೆ, ಮತ್ತೊಂದು ಫೋಟೋದಲ್ಲಿ ಸ್ಟೈಲೀಶ್ ಆಗಿ ಮಿಂಚಿದ್ದಾರೆ. ಎರಡು ಶೇಡ್‌ನಲ್ಲಿ ನಾಯಕನನ್ನು ಪರಿಚಯ ಮಾಡಿಕೊಡಲಾಗಿದೆ. ಹಿಂದೆಂದೂ ಕಾಣದ ವಿಭಿನ್ನ ಪಾತ್ರದಲ್ಲಿ ನಿತಿನ್ ನಟಿಸಿದ್ದಾರೆ.

 

ಎಕ್ಸ್ಟ್ರಾಡಿನರಿ ಮ್ಯಾನ್ ಔಟ್ ಅಂಡ್ ಔಟ್ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು, ಈಗಾಗಲೇ 60% ಶೂಟಿಂಗ್ ಕಂಪ್ಲೀಟ್ ಮಾಡಲಾಗಿದೆ. ಇನ್ನು, ನಿತಿನ್ ಗೆ ಜೋಡಿಯಾಗಿ ಮೋಸ್ಟ್ ಹ್ಯಾಪನಿಂಗ್ ನಟಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈ ಮೊದಲು ಈ ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿರುವುದಾಗಿ ಚಿತ್ರತಂಡ ತಿಳಿಸಿತ್ತು. ನಿತಿನ್- ರಶ್ಮಿಕಾ ನಟನೆಯ ‘ಭೀಷ್ಮ’ ಸಿನಿಮಾ ಹಿಟ್ ಆಗಿತ್ತು. ಹಾಗಾಗಿ ಅದೇ ಕಾಂಬಿನೇಷನ್‌ನಲ್ಲಿ ಮತ್ತೊಂದು ಸಿನಿಮಾ ಘೋಷಣೆ ಆಗಿತ್ತು. ಚಿತ್ರದಲ್ಲಿ ರಶ್ಮಿಕಾ ನಟಿಸೋದು ಕನ್ಫರ್ಮ್ ಆಗಿತ್ತು. ಸಿನಿಮಾ ಮುಹೂರ್ತ ಸಮಾರಂಭದಲ್ಲೂ ರಶ್ಮಿಕಾ ಭಾಗಿ ಆಗಿದ್ದರು. ಡೇಟ್ಸ್ ಕಾರಣದಿಂದ ರಶ್ಮಿಕಾ ಚಿತ್ರದಿಂದ ಹೊರ ನಡೆದಿದ್ದು, ಆ ಜಾಗಕ್ಕೆ ಶ್ರೀಲೀಲಾ ಎಂಟ್ರಿಯಾಗಿದೆ.

 

ಸುಧಾಕರ್ ರೆಡ್ಡಿ ಹಾಗೂ ನಿಖಿತಾ ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಿರುವ ಎಕ್ಸ್ಟ್ರಾಡಿನರಿ ಮ್ಯಾನ್ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗುತ್ತಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರುತ್ತಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಅನೌನ್ಸ್ ಮಾಡಿರುವ ಚಿತ್ರತಂಡ ಬಿಡುಗಡೆ ದಿನಾಂಕವನ್ನೂ ಸಹ ತಿಳಿಸಿದೆ. ಇದೇ ವರ್ಷಾಂತ್ಯಕ್ಕೆ ಅಂದರೆ ಡಿಸೆಂಬರ್ 23ಕ್ಕೆ ಎಕ್ಸ್ಟ್ರಾಡಿನರಿ ಮ್ಯಾನ್ ಸಿನಿಮಾ ತೆರೆಗೆ ಬರಲಿದೆ.

Spread the love
Click to comment

Copyright © 2019 PopcornKannada.com