Cinema News

ತೋತಾಪುರಿ-2 ಟ್ರೈಲರ್: 18ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ. ಗಣಪತಿ ಹಬ್ಬಕ್ಕೆ ಕಾಮಿಡಿ ಝಲಕ್

Published

on

ಒಂದೇ ಸೂರಿನಡಿ ಬದುಕುತ್ತಿರುವ ನಾವೆಲ್ಲ ಒಂದೇ ಎನ್ನುವ ಭಾವೈಕ್ಯತೆಯ ಸಂದೇಶ ಹೊಂದಿದ್ದ ತೋತಾಪುರಿ ಚಿತ್ರದ ಮುಂದುವರಿದ ಭಾಗ ‘ತೋತಾಪುರಿ -2’ ಶೀಘ್ರದಲ್ಲೇ ತೆರೆಕಾಣಲು ಸಿದ್ದವಾಗಿದೆ. ವಿಜಯಪ್ರಸಾದ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರವನ್ನು ಸುರೇಶ್ ಆರ್ಟ್ಸ್, ಮೋನ್ ಫ್ಲಿಕ್ಸ್ ಸ್ಟುಡಿಯೋಸ್ ಮೂಲಕ‌ ಕೆ.ಎ. ಸುರೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ದಿ.18ರ ಸೋಮವಾರ ಬೆಳಿಗ್ಗೆ 9-19ಕ್ಕೆ ಈ ಚಿತ್ರದ ಟ್ರೈಲರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ.

ನಟ ಡಾಲಿ ಧನಂಜಯ್ ಈ ಚಿತ್ರದಲ್ಲಿ ಜಗ್ಗೇಶ್ ಅವರ ಜೊತೆ ಪೂರ್ಣಪ್ರಮಾಣದ ನಾಯಕನಾಗಿ ಅಭಿನಯಿಸಿದ್ದಾರೆ. ಧನಂಜಯ್ ಹಾಗೂ ಜಗ್ಗೇಶ್ ಅವರ ಕ್ಯಾರೆಕ್ಟರ್ ಲುಕ್ ಗುರುಪೂರ್ಣಿಮೆಯ ದಿನ ಬಿಡುಗಡೆಯಾಗಿತ್ತು. ಮೊದಲ ಭಾಗದಲ್ಲಿ ನವರಸ ನಾಯಕ ಜಗ್ಗೇಶ್, ಅದಿತಿ ಪ್ರಭುದೇವ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಸದ್ಯದಲ್ಲೇ ಚಿತ್ರತಂಡ ಸಿನಿಮಾದ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಿದ್ದು, ಚಿತ್ರಕ್ಕೆ ನಿರಂಜನ ಬಾಬು ಅವರ ಕ್ಯಾಮೆರಾವರ್ಕ್, ಅರುಣ್ ಆಂಡ್ರ್ಯೂ ಅವರ ಸಂಗೀತ ಸಂಯೋಜನೆಯಿದೆ. ನಮ್ಮ ನಿರೀಕ್ಷೆಯಂತೆಯೇ ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಪ್ರೇಕ್ಷಕರಿಗೆ ಇಷ್ಟವಾಗುವ ಮನರಂಜನಾತ್ಮಕ ಕಂಟೆಂಟ್ ಚಿತ್ರದಲ್ಲಿದೆ. ಥೇಟರಿಗೆ ಬರುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆಯ ಜೊತೆ ಪರಿಶುದ್ದ ಹಾಸ್ಯದ ಹೂರಣವೂ ಇರುತ್ತದೆ ಎಂದು ನಿರ್ಮಾಪಕ ಕೆ.ಎ.ಸುರೇಶ್ ಹೇಳಿದ್ದಾರೆ, ಉಳಿದಂತೆ ಚಿತ್ರದಲ್ಲಿ ದತ್ತಣ್ಣ, ಸುಮನ ರಂಗನಾಥ್, ವೀಣಾ ಸುಂದರ್, ಹೇಮಾದತ್ ಹೀಗೆ ಮೊದಲ ಭಾಗದಲ್ಲಿದ್ದ ಬಹುತೇಕ ಪಾತ್ರಗಳು ಮುಂದುವರಿದಿವೆ.

Spread the love

Copyright © 2019 PopcornKannada.com