Television News
ನೂಪುರ್ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಇಬ್ಬರ ಸಾವು

ರಾಂಚಿ: ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯ ಕಿಚ್ಚು ದೇಶವ್ಯಾಪಿ ಹಬ್ಬುತ್ತಿದೆ. ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆಗಳನ್ನು ಮಾಡಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸುತ್ತಿವೆ. ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಹತ್ತು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರು ಇಬ್ಬರು ಗುಂಡು ಹಾರಿಸಿದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಸದ್ಯ ಜಾರ್ಖಂಡ್ನ ರಾಜಧಾನಿಯ ಹಲವು ಭಾಗಗಳಲ್ಲಿ ಕಫ್ರ್ಯೂ ವಿಧಿಸಲಾಗಿದೆ.
