Cinema News
ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು “ಹೊಯ್ಸಳ” ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ

ಡಾಲಿ ಧನಂಜಯ್ ಅಭಿನಯದ “ಹೊಯ್ಸಳ” ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗಿದೆ. ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು “ಹೊಯ್ಸಳ” ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ ಅಮೃತಾ ಅಯ್ಯಂಗಾರ್, ನಿರ್ಮಾಪಕರಾದ ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ನಿರ್ದೇಶಕ ವಿಜಯ್ ನಾಗೇಂದ್ರ, ಸಾಹಸ ನಿರ್ದೇಶಕ ದಿಲೀಪ್ ಸುಬ್ಬರಾಯಣ್ ಮುಂತಾದವರು ಉಪಸ್ಥಿತರಿದ್ದರು.
ಮಹಿಳಾ ಕ್ರಿಕೆಟ್ ನಲ್ಲಿ ವೇದ ಕೃಷ್ಣಮೂರ್ತಿ ಅವರು ತಮ್ಮದೇ ಆದ ಹೆಸರು ಮಾಡಿದ್ದಾರೆ. 2017 ರ ಮಹಿಳಾ ಕ್ರಿಕೆಟ್ ವಿಶ್ವಕಪ್ ನಲ್ಲಿ ಭಾರತ ತಂಡ ಫೈನಲ್ ತಲುಪಿತು. ಆ ತಂಡದಲ್ಲಿ ವೇದ ಕೃಷ್ಣಮೂರ್ತಿ ಸಹ ಇದ್ದರು.

Continue Reading