Cinema News
ನಯನತಾರಾ ತಪ್ಪಿಗೆ ಕ್ಷಮೆಯಾಚಿಸಿದ ವಿಘ್ನೇಶ್ ಶಿವನ್
ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿವಾದಕ್ಕೆ ಸಿಲುಕಿ ಬಳಿಕ ಕ್ಷಮೆಯಾಚಿಸಿದ್ದಾರೆ.
ಗುರುವಾಗ ವೆಂಕಟೇಶ್ವರನ ಕಲ್ಯಾಣೋತ್ಸವದಲ್ಲಿ ಭಾಗವಹಿಸಲು ತಿರುಪತಿಯ ಬೆಟ್ಟದ ದೇವಸ್ಥಾನಕ್ಕೆ ತೆರಳಿದ್ದ ವೇಳೆ, ನಟಿ ನಯನತಾರಾ ಪಾದರಕ್ಷೆಗಳನ್ನು ಧರಿಸಿ ದೇಗುಲದ ಆವರಣದಲ್ಲಿ ನಡೆಯುತ್ತಿರುವುದು ವಿವಾದ ಉಂಟುಮಾಡಿತ್ತು. ಅದಕ್ಕೀಗ ನಯನತಾರಾ ಪತಿ ವಿಘ್ನೇಶ್ ಶಿವನ್ ಕ್ಷಮೆ ಕೇಳಿದ್ದು, ಅರಿವಿಗೆ ಬಾರದೇ ಇರುವ ತಪ್ಪು ಅದಾಗಿದೆ ಎಂದಿದ್ದಾರೆ.
ಪತಿ ವಿಘ್ನೇಶ್ ಬರಿಗಾಲಲ್ಲಿ ನಡೆದುಕೊಂಡು ಬಂದರೆ, ನಯನತಾರಾ ಚಪ್ಪಲಿ ಧರಿಸಿದ್ದರಂತೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನಯನತಾರಾ ವಿರುದ್ಧ ಭಕ್ತರು ಮುಗಿಬಿದ್ದಿದ್ದರು. ವಿವಾದ ಸೃಷ್ಟಿ ಆಗುತ್ತಿದ್ದಂತೆಯೇ ತಿರುಮಲ ಅಧಿಕಾರಿಗಳು ಮಧ್ಯೆ ಪ್ರವೇಶಿಸಿ, ನಯನತಾರಾ ಚಪ್ಪಲಿ ಧರಿಸಿ ಓಡಾಡಿದ ಸ್ಥಳದಲ್ಲಿ ಭಕ್ತರಿಗೆ ಪಾದರಕ್ಷೆಗಳನ್ನು ತೊಡಲು ಅವಕಾಶವಿದೆ ಎಂದು ಹೇಳಿದ್ದಾರೆ.