Cinema News
ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ “wolf” ಚಿತ್ರಕ್ಕೆ ವಿಶೇಷ ಗೀತೆ ಹಾಡಿದ ವಿಜಯ್ ಸೇತುಪತಿ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.

ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು.
ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ.

ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Continue Reading