Cinema News

‘ರೋಲೆಕ್ಸ್’ ಚಿತ್ರಕ್ಕೆ ವಿನೋದ್ ಪ್ರಭಾಕರ್ ಎಂಟ್ರಿ; ಕೋಮಲ್ ಜೊತೆ ಹೊಸ ಕಾಂಬಿನೇಷನ್

Published

on

ಮಧು ಫಿಲಂ ಸರ್ಕ್ಯೂಟ್ಸ್ ಬ್ಯಾನರ್ ಅಡಿಯಲ್ಲಿ ಅಂಬಟಿ ಮಧು ಮೋಹನಕೃಷ್ಣ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಕನ್ನಡ ಚಿತ್ರ ‘ರೋಲೆಕ್ಸ್’ ಹೊಸ ಅಪ್‌ಡೇಟ್ ಮೂಲಕ ಸಿನಿಪ್ರಿಯರ ಗಮನ ಸೆಳೆದಿದೆ. ಆಂಧ್ರ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರೂ ಆಗಿರುವ ಅಂಬಟಿ ಮಧು ಮೋಹನಕೃಷ್ಣ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿದ್ದಾರೆ. ನಾಯಕನಾಗಿ ಕೋಮಲ್ ಕುಮಾರ್ ನಟಿಸುತ್ತಿದ್ದು, ಸೋನಾಲ್ ಮೊಂತೆರೊ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರದ ಪ್ರಮುಖ ವಿಶೇಷತೆ ಎಂದರೆ ಜನಪ್ರಿಯ ನಟ ವಿನೋದ್ ಪ್ರಭಾಕರ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವುದು. ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಕಾಣಿಸದ ರೀತಿಯ ಪಾತ್ರದಲ್ಲಿ ಅವರು ಪ್ರೇಕ್ಷಕರ ಮುಂದೆ ಬರಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಕೋಮಲ್ ಕುಮಾರ್ ಮತ್ತು ವಿನೋದ್ ಪ್ರಭಾಕರ್ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.
ಕಾಮಿಡಿಯ ಜೊತೆಗೆ ಕೌಟುಂಬಿಕ ಭಾವನೆಗಳನ್ನು ಒಳಗೊಂಡಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಕೋಮಲ್ ಕುಮಾರ್ ಈ ಚಿತ್ರದಲ್ಲಿ ತಮ್ಮ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದು, ಅವರ ಹೊಸ ಲುಕ್ ಈಗಾಗಲೇ ಕುತೂಹಲ ಹುಟ್ಟಿಸಿದೆ. ಅಚ್ಯುತಕುಮಾರ್, ನವೀನ್ ಪಡೀಲ್ ಹಾಗೂ ಅರುಣ್ ಬಾಲರಾಜ್ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
‘ರೋಲೆಕ್ಸ್’ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದು, ನಾಲ್ಕು ಹಾಡುಗಳು ಚಿತ್ರದಲ್ಲಿವೆ. ಡಾ. ವಿ. ನಾಗೇಂದ್ರಪ್ರಸಾದ್, ಕವಿರಾಜ್, ರಾಜೇಶ್ ವರ್ಮ ಹಾಗೂ ಕಿನ್ನಾಳ್ ರಾಜ್ ಸಾಹಿತ್ಯ ರಚಿಸಿದ್ದಾರೆ. ರಾಕೇಶ್ ಸಿ. ತಿಲಕ್ ಅವರ ಛಾಯಾಗ್ರಹಣ, ಅರವಿಂದ್ ರಾಜ್ ಅವರ ಸಂಕಲನ, ಯೋಗಾನಂದ್ ಸಾಹಸ ನಿರ್ದೇಶನ ಮತ್ತು ಕಲೈ-ಮುರಳಿ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಮುರಳಿಕೃಷ್ಣ ಕಾರ್ಯಕಾರಿ ನಿರ್ಮಾಪಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ.

Spread the love

Copyright © 2019 PopcornKannada.com