Box Office
50ನೇ ದಿನದತ್ತ “ವೀಕೆಂಡ್”
ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸಿರುವ `ವೀಕ್ ಎಂಡ್` ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಪ್ರದರ್ಶನ ಕಾಣುತಿದೆ. ಈ ಚಿತ್ರ 35 ದಿನಗಳು ಪೂರೈಸಿದ ಸಂದರ್ಭದಲ್ಲಿ ಸಿರಸಿ ಸರ್ಕಲ್‍ನಲ್ಲಿರುವ ಗೋಪಾಲನ್ ಸಿನಿಮಾಸ್‍ನಲ್ಲಿ ಚಿತ್ರತಂಡ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಆರ್,ಎಂ.ಎಸ್ ಇಂಟರ್ ನ್ಯಾಷನಲ್ ಶಾಲೆಯ ಮುಖ್ಯಸ್ಥರಾದ ರತ್ನಮ ಶ್ರೀನಿವಾಸ್ ಹಾಗೂ ಶಾಲೆಯ ಪ್ರಾಂಶುಪಾಲರು ಮುಖ್ಯಅತಿಥಿಗಳಾಗಿ ಆಗಮಿಸಿ ಶುಭ ಕೋರಿ ಚಿತ್ರವನ್ನು ವೀಕ್ಷಿಸಿದರು. ನಾಯಕ ಮಿಲಿಂದ್, ನಿರ್ದೇಶಕ ಶೃಂಗೇರಿ ಸುರೇಶ್ ಸೇರಿದಂತೆ ಚಿತ್ರತಂಡ ಬಹುತೇಕ ಸದಸ್ಯರು ಉಪಸ್ಥಿತರಿದ್ದರು. ಚಿತ್ರ ಈಗ 35ದಿನಗಳನ್ನು ಪೂರೈಸಿ 50ನೇ ದಿನದತ್ತ ಮುನ್ನಡೆಯುತ್ತಿದೆ.
ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆಯಿದೆ.
ಮಿಲಿಂದ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.